ಹಾಸನ, ಮಂಡ್ಯ ಕ್ಷೇತ್ರಗಳನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟ BJP; ಅಧಿಕೃತವಾಗಿ ಘೋಷಿಸಿದ ಕಮಲ ಪಾಳೆಯ
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಆಮತಿಮವಾಗಿದ್ದು; ವಿವಾದಿತ ಕೋಲಾರ ಲೋಕಸಭೆ ಕ್ಷೇತ್ರವನ್ನೂ ಸೇರಿದಂತೆ ಹಾಸ ಮತ್ತು ಮಂಡ್ಯ ಕ್ಷೇತ್ರಗಳನ್ನು ಬಿಜೆಪಿ ತನ್ನ ಮಿತ್ರಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.
ಅರಮನೆ ಮೈದಾನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ʼವಾಲ್ ಅವರು ಕ್ಷೇತ್ರ ಹಂಚಿಕೆ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಕ್ಷೇತ್ರ ಹಂಚಿಕೆ ಬಗ್ಗೆ ಉಂಟಾಗಿದ್ದ ಸಣ್ಣ ಪ್ರಮಾಣದ ಗೊಂದಲಕ್ಕೆ ಮಿತ್ರಪಕ್ಷಗಳೆರಡೂ ಇತಿಶ್ರೀ ಹಾಡಿವೆ.
ಕಾರ್ಯಾಗಾರದಲ್ಲಿ ಮಾತನಾಡಿದ ಅಗರ್ʼವಾಲ್ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಮಿತ್ರಪಕ್ಷ ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಆ ಪಕ್ಷಕ್ಕೆ ಮೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಕೋಲಾರ, ಹಾಸನ, ಮಂಡ್ಯ ಕ್ಷೇತ್ರಗಳಲ್ಲಿ ಆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಆದ್ದರಿಂದ ನಮ್ಮ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
- ರಾಧಾ ಮೋಹನದಾಸ್ ಅಗರ್ʼವಾಲ್
ನಾವು ನೀವೆಲ್ಲರೂ ಮೋದಿ ಅವರಿಗಾಗಿ ಕೆಲಸ ಮಾಡಬೇಕು. ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮೂರು ಕ್ಷೇತ್ರಗಳ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುಂದಿಟ್ಟು ಹಾನಿ ಉಂಟು ಮಾಡಬೇಡಿ ಎಂದು ಅವರು ವಿನಂತಿ ಮಾಡಿಕೊಂಡಿದ್ದಾರೆ.
ರಾಜ್ಯದ ಒಟ್ಟು 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಿರುವ ಬಿಜೆಪಿ ಉಖಿದ ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಯಲಿದೆ. ಈಗಾಗಲೇ ಅಭ್ಯರ್ಥಿಗಳ ಹೆಸರನ್ನೂ ಅಂತಿಮಗೊಳಿಸಿ ಘೋಷಣೆ ಮಾಡಿದೆ.
ಇದೇ ವೇಳೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ದೆಹಲಿಗೆ ತೆರಳಿದ್ದು, ಭಾರತೀಯ ಜನತಾಪಕ್ಷದ ಕೆಲ ಪ್ರಮುಖ ನಾಯಕರನ್ನು ಅವರು ಭೇಟಿ ಮಾಡುವ ನಿರೀಕ್ಷೆ ಇದೆ.
ಮತ್ತೊಂದೆ ಚೆನ್ನೈನಲ್ಲಿ ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ (ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ನಾಳೆ ಸಂಜೆಯೊಷ್ಟೊತ್ತಿಗೆ ಅವರು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್
ಎನ್ ಡಿಎ ಮೈತ್ರಿಕೂಟದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಹೊತ್ತಿಗೆ ಅಂತಿಮಗೊಳಿಸುವ ಸಾಧ್ಯತೆ ಇದೆ. ಈ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಂಡಿದ್ದು; ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.ಆರ್,ವಿಶ್ವನಾಥ್ ಅವರ ಪುತ್ರ ಅನೂಪ್ ಅವರ ಹೆಸರು ಪರಿಗಣನೆಯಲ್ಲಿ ಇದ್ದು, ಚಿಕ್ಕಬಳ್ಳಾಪುರದ ಕಡೆಯವರಿಗೇ ಟಿಕೆಟ್ ಸಿಗುವ ಸಾಧ್ಯತೆ ನಿಶ್ಚಳವಾಗಿದೆ.
Comments 1