• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೋಮಾದಲ್ಲಿ ಕಾಂಗ್ರೆಸ್ ಸರಕಾರ; ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರು!!

cknewsnow desk by cknewsnow desk
September 3, 2024
in STATE
Reading Time: 1 min read
0
ಕೋಮಾದಲ್ಲಿ ಕಾಂಗ್ರೆಸ್ ಸರಕಾರ; ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರು!!
918
VIEWS
FacebookTwitterWhatsuplinkedinEmail

ಸರಕಾರದ ಮೇಲೆ ನಂಬಿಕೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ದೂರಿದರು.

ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್‌ ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್‌ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್‌ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.

ರೀಲ್ಸ್‌ಗೆ ಹಣ ಖರ್ಚು

ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅಂಗನವಾಡಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿಲ್ಲ. ಆದರೆ ರೀಲ್ಸ್‌ ಮಾಡಲು 60-70 ಕೋಟಿ ರೂ. ನೀಡುತ್ತಿದ್ದಾರೆ. ಅದೇ ಹಣದಲ್ಲಿ ಶಾಲೆಗಳ ದುರಸ್ತಿ ಮಾಡಬಹುದಿತ್ತು ಎಂದರು. ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಆರೋಪಕ್ಕೆ ಸರ್ಕಾರ ಉತ್ತರ ನೀಡಬೇಕಿತ್ತು. ಅದನ್ನು ಬಿಟ್ಟು ಆರೋಪದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್‌ ವಿಚಾರದಲ್ಲೂ ತನಿಖಾ ಆಯೋಗ ಮಾಡಿದ್ದು, ಅರ್ಧದಲ್ಲೇ ವರದಿ ಪಡೆದು ದ್ವೇಷ ರಾಜಕಾರಣ ಮಾಡಲಾಗಿದೆ. ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗಲೇ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದರು.

ಜಾತಿಯಡಿ ರಕ್ಷಣೆ ಬೇಡ

ನಿರ್ದಿಷ್ಟ ಜಾತಿಗಳು ಕೊಲೆ, ಭ್ರಷ್ಟಾಚಾರ ಮಾಡಿದರೆ ಅವರ ವಿರುದ್ಧ ಮಾತಾಡಬಾರದು ಎಂಬ ಕಾನೂನನ್ನು ಕಾಂಗ್ರೆಸ್‌ ತರಲಿ ಎಂದು ವ್ಯಂಗ್ಯವಾಡಿದ ಆರ್‌.ಅಶೋಕ, ತಪ್ಪು ಮಾಡುವಲ್ಲಿ ಹಿಂದುಳಿದ ವರ್ಗದವರು, ಬ್ರಾಹ್ಮಣರು, ದಲಿತರು ಎಂಬ ವರ್ಗ ಇಲ್ಲ. ಬಾಬಾ ಸಾಹೇಬ್‌ ಅಂಬೇಡ್ಕರರು ಸಂವಿಧಾನದಲ್ಲಿ ಈ ರೀತಿಯ ಭಿನ್ನತೆ ತಂದಿಲ್ಲ. ಜಾತಿಗೂ ಕಾನೂನಿಗೂ ಸಂಬಂಧವಿಲ್ಲ. ಜಾತಿಯಡಿ ರಕ್ಷಣೆ ಪಡೆಯಲು ಹೋದರೆ ಜನರು ಒಪ್ಪುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾದ 14 ಸೈಟುಗಳು ಏಕೆ ಬೇಕಿತ್ತು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ಇದನ್ನು ವಿರೋಧಿಸಿದರೆ ಹಿಂದುಳಿದ ನಾಯಕನನ್ನು ಗುರಿ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಕ್ಕೆ ನಿಂದಿಸಲಾಗುತ್ತಿದೆ. ತಪ್ಪೇ ಮಾಡಿಲ್ಲವೆಂದರೆ ಆಯೋಗವನ್ನು ಏಕೆ ನೇಮಕ ಮಾಡಿದ್ದಾರೆ? ತಪ್ಪಿತಸ್ಥರಾದ ಮುಖ್ಯಮಂತ್ರಿಯೇ ಆಯೋಗ ನೇಮಕ ಮಾಡಲು ಕಾನೂನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದರು.

ರಾಜೀನಾಮೆ ನೀಡಿ

50:50 ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನ ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಪರಿಗಣಿಸಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಪೂರ್ವಾನ್ವಯವಾಗುತಂತೆ 50:50 ಅನುಪಾತದಲ್ಲಿ ನೀಡಿರುವುದೂ ಸಹ ತಪ್ಪು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ.

ಹಿಂದಿನ ಬಿಜೆಪಿ ಸರ್ಕಾರ ನೇಮಿಸಿದ್ದ ತಾಂತ್ರಿಕ ಸಮಿತಿ ಮುಡಾ ಅಕ್ರಮದ ಬಗ್ಗೆ ವರದಿ ನೀಡಿ 10 ತಿಂಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತನಿಖೆ ನಡೆಯುತ್ತಿದ್ದರೂ ತಪ್ಪಿತಸ್ಥ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಈಗ ದಿಢೀರನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಬಯಲಿಗೆ ಬಂದಾಗಿನಿಂದ ಗಲಿಬಿಲಿಗೊಂಡಿದ್ದಾರೆ, ಮಂಕಾಗಿದ್ದಾರೆ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ಸ್ವ ಪಕ್ಷದವರೇ ಹೇಳುತ್ತಿದ್ದಾರೆ.

ಈಗಲಾದರೂ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ಅಧಿಕಾರದಿಂದ ನಿರ್ಗಮಿಸಬೇಕು. ತಮ್ಮ ಗೌರವ ಕಾಪಾಡಿಕೊಳ್ಳುವುದರ ಜೊತೆಗೆ ರಾಜ್ಯದ ಗೌರವವನ್ನೂ ಉಳಿಸಬೇಕು ಎಂದು ಆಗ್ರಹಿಸಿದರು.

ಅಪನಂಬಿಕೆಯ ಸರ್ಕಾರ

ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿಯಾದ ಡಿಸಿಎಂ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲ. ಬೆಂಗಳೂರಿನ ಜನತೆಗೆ ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ, ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ, ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ, ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ, ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ, ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಟೀಕೆ ಮಾಡಿದರು.

Tags: -Karnataka-mysorebjpCongresMuda caser ashokasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Leave a Reply Cancel reply

Your email address will not be published. Required fields are marked *

Recommended

ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು

ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು

5 years ago
ಮದುವೆಗೆ ಹೆಣ್ಣು ಸಿಗಲಿಲ್ಲ ಎಂಬ ಹತಾಶೆಯಿಂದ ಒಡಹುಟ್ಟಿದ ಅಣ್ಣನ ಐದು ವರ್ಷದ ದಿವ್ಯಾಂಗ ಮಗಳನ್ನೇ ಕತ್ತುಕುಯ್ದು ಕೊಂದ ಪರಮ ಪಾತಕಿ

ಮದುವೆಗೆ ಹೆಣ್ಣು ಸಿಗಲಿಲ್ಲ ಎಂಬ ಹತಾಶೆಯಿಂದ ಒಡಹುಟ್ಟಿದ ಅಣ್ಣನ ಐದು ವರ್ಷದ ದಿವ್ಯಾಂಗ ಮಗಳನ್ನೇ ಕತ್ತುಕುಯ್ದು ಕೊಂದ ಪರಮ ಪಾತಕಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ