ನವದೆಹಲಿ: ಪಹಲ್ಗಾಮ್ ದುಷ್ಕೃತ್ಯಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು ಮುಂಜಾನೆ ಆಪರೇಷನ್ ಸಿಂಧೂರ ನಡೆಸಿ ಪಾಕಿಸ್ತಾನ ಹಾಗೂ ಉಗ್ರರಿಗೆ ಶಾಕ್ ನೀಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದ ಪಾಕಿಸ್ತಾನ ತತ್ತರಿಸಿದೆ.
ನಿಷೇಧಿತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಪ್ರಧಾನ ಕಚೇರಿಗಳನ್ನು ಆಪರೇಷನ್ ಸಿಂಧೂರ್’ ಅಡಿಯಲ್ಲಿ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಸಿಕ್ಕಿರುವ ಮಾಹಿತಿಯಂತೆ ಸುಮಾರು ಎಂಭತ್ತರಿಂದ ನೂರು ಜನ ನರರಾಕ್ಷಸ ಭಯೋತ್ಪಾದಕರು ದಾಳಿಯಿಂದ ಹತರಾಗಿದ್ದಾರೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಭತ್ತು ಅಡಗುತಾಣಗಳ ಮೇಲೆ ಭಾರತೀಯ ಸೇನೆ ಬೆಳಗಿನ ಜಾವ ಸುಮಾರು 1.30ರಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ ನಡೆಸಿದ ಈ ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳಾದ ಬಹಾವಲ್ಪುರದ ಮರ್ಕಜ್ ಸುಭಾನ್ ಅಲ್ಲಾ, ತೆಹ್ರಾ ಕಲಾನ್‌ನಲ್ಲಿರುವ ಸರ್ಜಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯದ್ನಾ ಬಿಲಾಲ್ ಶಿಬಿರಗಳ ಮೇಲೆ ಕರಾರುವಾಕ್ಕಾದ ನಿರ್ದಿಷ್ಟ ದಾಳಿ ನಡೆಸಲಾಗಿದೆ.
ಮುರ್ಡಿಕೆಯಲ್ಲಿರುವ ನಿಷೇಧಿತ ಲಷ್ಕರ್-ಎ-ತೈಬಾಗೆ ಸೇರಿದ ಮರ್ಕಜ್ ತೈಬಾ, ಬರ್ನಾಲಾದಲ್ಲಿರುವ ಮರ್ಕಜ್ ಅಹ್ಲೆ ಹದೀಸ್ ಮತ್ತು ಮುಜಫರಾಬಾದ್‌ನ ಶ್ವಾವೈ ನಲ್ಲ ಶಿಬಿರ ಮತ್ತು ಕೋಟ್ಲಿಯಲ್ಲಿರುವ ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್‌ನ ಶಿಬಿರಗಳು ಮತ್ತು ತರಬೇತಿ ಕೇಂದ್ರಗಳಾದ ಮಕಾಜ್ ರಹೀಲ್ ಶಾಹಿದ್ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ಮೆಹಮೂನಾ ಜೋಯಾ ಕೇಂದ್ರಗಳನ್ನು ಗುರಿಯಾಗಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ನಾಗರಿಕರನ್ನು ಹತ್ಯೆ ಮಾಡಿದ ಎರಡು ವಾರಗಳ ನಂತರ ಆಪರೇಷನ್ ಸಿಂಧೂರ್ ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಗಿದ್ದು,ಹಲವಾರು ಉಗ್ರರು ಮೃತಪಟ್ಟಿದ್ದಾರೆ.
ಮಸೂದ್, ಹಫೀಜ್ ಪಾರು
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಾದ ಲಷ್ಕರ್ ಎ ತಯ್ಯೇಬಾ ಮುಖ್ಯಸ್ಥ ಸಯ್ಯದ್ ಹಫೀಸ್ ಮೊಹಮ್ಮದ್ ಹಾಗೂ ಜೈಷ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಅವರಿಬ್ಬರೂ ಭಾರತದ ದಾಳಿಯಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
ಆದರೆ, ಅದೇ ಮೂಲಗಳು ಹೇಳಿರುವ ಪ್ರಕಾರ ಆ ಇಬ್ಬರು ಕಿರಾತಕರ ಮಾರಿಹಬ್ಬ ಮುಂದೈತೆ ಎಂದು ಖಚಿತಪಡಿಸಿವೆ.
ನವದೆಹಲಿಯಲ್ಲಿ ಇಂದು ಮಧ್ಯಾಹ್ನ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ ಕುರಿತಂತೆ ಭಾರತೀಯ ಸಶಸ್ತ್ರ ಪಡೆಗಳ ಇಬ್ಬರು ಮಹಿಳಾ ಹಿರಿಯ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದರು. ಅಲ್ಲದೆ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಈ ಮಾಧ್ಯಮಗೋಷ್ಠಿಯಲ್ಲಿ ಇದ್ದರು.
ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ. ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ತನ್ನ ಹಕ್ಕು ಚಲಾಯಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದರು.
“ಭಯೋತ್ಪಾದನೆಯ ಬೆನ್ನೆಲುಬು ಮುರಿಯಲು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು. ಒಟ್ಟು ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ.” / ಸೋಫಿಯಾ ಖುರೇಷಿ
ಸೇನಾ ಕರ್ನಲ್ ಸೋಫಿಯಾ ಖುರೇಷಿ & ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್
ಪಾಕ್ ದಾಳಿ ನಡೆಸಿದರೆ ಭೀಕರ ದಾಳಿ ಎಂದ ದೋವಲ್
ಭಾರತವು ಉದ್ವಿಗ್ನತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿಲ್ಲ. ಆದರೆ, ಪಾಕಿಸ್ತಾನ ನಮ್ಮ ಮೇಲೆ ದಾಳಿ ಮಾಡಿದಲ್ಲಿ, ಅದಕ್ಕೆ ದುಪ್ಪಟ್ಟು ಪ್ರತೀಕಾರ ಮಾಡಬೇಕಾಗುತ್ತದೆ. ನಮ್ಮ ಪ್ರತೀಕಾರ ಭೀಕರವಾಗಿರುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ವಿವಿಧ ದೇಶಗಳ ಮುಖ್ಯಸ್ಥರಿಗೆ ತಿಳಿಸಿದ್ದಾರೆ.
ಅಜಿತ್ ದೋವಲ್ ಅವರು ಅಮೆರಿಕದ ಎನ್ಎಸ್ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ಇಂಗ್ಲೆಂಡ್ನ ಜೊನಾಥನ್ ಪೊವೆಲ್, ಸೌದಿ ಅರೇಬಿಯಾದ ಮುಸೈದ್ ಅಲ್ ಐಬಾನ್, ಯುಎಇಯ ಶೇಖ್ ತಹ್ನೂನ್ ಮತ್ತು ಜಪಾನ್‌ನ ಮಸಟಕ ಒಕಾನೊ, ರಷ್ಯಾದ ಎನ್ಎಸ್ಎ ಮುಖ್ಯಸ್ಥ ಸೆರ್ಗೆಯ್ ಶೋಯಿಗು, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಬೊನ್ನೆ ಅವರೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.
ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.
ನಿಖಿಲ್ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು