ವಿಡಿಯೋ ಸಮೇತ ಮಾಹಿತಿ ಕೊಟ್ಟ #BSF
ನವದೆಹಲಿ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹತ್ಯೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.
ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.
ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಬಿಎಸ್‌ಎಫ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.
ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.
ಈ ಉಗ್ರರಿಗೆ ಪಾಕಿಸ್ತಾನ ಸೇನೆಯೇ ನುಸುಳಲು ನೆರವು ನೀಡಿದೆ. ವಿಷಯ ತಿಳಿದ ಕೂಡಲೇ ಬಿಎಸ್ಎಫ್ ಯೋಧರು ಕಾರ್ಯಾಚರಣೆಗಿಳಿದಿದ್ದು, ಉಗ್ರರು ಮತ್ತು ಪಾಕ್ ರೇಂಜರ್ಸ್ ರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ