• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

cknewsnow desk by cknewsnow desk
May 10, 2025
in NATION, STATE, WORLD
Reading Time: 1 min read
0
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ
935
VIEWS
FacebookTwitterWhatsuplinkedinEmail

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK

ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ರಿಕ್ತ ಪರಿಸ್ಥಿತಿಯ ನಡುವೆ ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗುತ್ತದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಜ್ಯದ ಈ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ ನಂತರ ಭಾರತ ನೇರ ರಾಷ್ಟ್ರಕ್ಕೆ ತಕ್ಕ ತಿರುಗೇಟು ನೀಡಿತ್ತು. ಈ ಸಂದರ್ಭದಲ್ಲಿ ಯುದ್ಧ ಸನ್ನಿವೇಶ ತಲೆದೋರಿತ್ತು. ತಮ್ಮನ್ನು ರಕ್ಷಣೆ ಮಾಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಶುಕ್ರವಾರದಂದು ನಾನು ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ಭಾವಿಯಾಗಿದ್ದೆ. ಆ ಸಂದರ್ಭದಲ್ಲಿ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರು ಈ ಬಗ್ಗೆ ಮನವಿ ಮಾಡಿದರು. ತಮ್ಮ ಪುತ್ರ ಹರ್ಷಿತ್ ಅವರು ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿಂದ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ನನ್ನ ಸಹಾಯ ಕೋರಿದರು. ಅಲ್ಲದೆ, ಕರ್ನಾಟಕದ ಇನ್ನೂ ಹಲವಾರು ವಿದ್ಯಾರ್ಥಿಗಳು ಅಲ್ಲಿ ಓದುತ್ತಿರುವ ಮಾಹಿತಿ ಸಿಕ್ಕಿತು.

ಕೂಡಲೇ ನಾನು ಈ ವಿಷಯವನ್ನು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಗಮನಕ್ಕೆ ತಂದು, ವಿದ್ಯಾರ್ಥಿಗಳ ರಕ್ಷಣೆಗೆ ನೆರವಾಗುವಂತೆ ಮನವಿ ಮಾಡಿದೆ. ನನ್ನ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು; ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು ಹಾಗೂ ಮಕ್ಕಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜಿಸಿದರು. ಈ ಮೂಲಕ ಕೃಷಿ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಮರಳಿ ನಮ್ಮ ನಾಡಿಗೆ ಕರೆತರುವ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಮಾಡಲಾಯಿತು ಎಂದು ನಿಖಿಲ್ ಅವರು ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಈಗಾಗಲೇ ಜಮ್ಮುವಿನಿಂದ ಹೊರಟು ರಾತ್ರಿಯ ವೇಳೆಗೆ ನವದೆಹಲಿ ತಲುಪಲಿದ್ದಾರೆ. ಅಲ್ಲಿಂದ ಅವರೆಲ್ಲರನ್ನೂ ಬೆಂಗಳೂರಿಗೆ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ ಎಂದಿರುವ ಅವರು; ಕಾಶ್ಮೀರದಿಂದ ಕರ್ನಾಟಕಕ್ಕೇ ಮರಳುತ್ತಿರುವ ವಿದ್ಯಾರ್ಥಿಗಳ ಜೊತೆಯಲ್ಲಿರುವ ಚನ್ನಪಟ್ಟಣ ತಾಲ್ಲೂಕಿನ ವಿದ್ಯಾರ್ಥಿ ಹರ್ಷಿತ್ ಅವರೊಂದಿಗೆ ವಿಡಿಯೋ ಕರೆ ಮಾಡಿ ಎಲ್ಲರ ಯೋಗಕ್ಷೇಮ ವಿಚಾರಿಸಿದೆ. ಈಗ ಎಲ್ಲಾ ವಿದ್ಯಾರ್ಥಿಗಳು ಕಾಶ್ಮೀರಿನಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದು, ನಂತರ ದಿಲ್ಲಿ ತಲುಪಿ, ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಇವರೆಲ್ಲರೂ ಕ್ಷೇಮವಾಗಿ ಪ್ರಯಾಣಿಸುತ್ತಿದ್ದು, ನಾನು ಮತ್ತು ನಮ್ಮ ತಂಡ ಇವರೊಂದಿಗೆ ನಿರಂತರ ಸಂಪರ್ಕಲ್ಲಿದ್ದೇನೆ. ಇವರ ಪೋಷಕರು ಮತ್ತು ಸಂಬಂಧಿಗಳು ಯಾವುದೇ ಆತಂಕಪಡುವ ಅವಶ್ಯಕತೆ ಇರುವುದಿಲ್ಲ. ಇವರನ್ನ ಬೆಂಗಳೂರಿಗೆ ಕರೆತರಲು ಸಹಾಯ ಮಾಡಿದ ಎಲ್ಲಾ ಕೇಂದ್ರ ಸರ್ಕಾರದ ಇಲಾಖೆಯ ಅಧಿಕಾರಿಗಳಿಗೂ ಧನ್ಯವಾದಗಳನ್ನು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ನಿನ್ನೆ ಚನ್ನಪಟ್ಟಣದ ಕಾರ್ಯಕ್ರಮದಲ್ಲಿ, ತೊಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರು ತಮ್ಮ ಮಗನಾದ ಹರ್ಷಿತ್ ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿಂದ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ನನ್ನ ಸಹಾಯ ಕೋರಿದರು.

ನಾನು ಈ ವಿಷಯವನ್ನು ಕೇಂದ್ರ ಸಚಿವರಾದ ಮಾನ್ಯ ಕುಮಾರಣ್ಣನವರ ಗಮನಕ್ಕೆ ತಂದ ನಂತರ, ಅವರು ಕೂಡಲೇ… pic.twitter.com/gXXzyxD2QI

— Nikhil Kumar (@Nikhil_Kumar_k) May 10, 2025
Tags: ckcknewsnowhd kumaraswamyindiaindian armykarnataka students evacuated from jammunikil kumaraswamypakistan
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ; ಸುಳ್ಳು ಸುತ್ತೋಲೆ ಸೃಷ್ಟಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಿಸಿಎಂ

5 years ago
ಕಿಸಾನ್‌ ರೈಲಿನಲ್ಲಿ ದೆಹಲಿಗೆ ಹೊರಟ ಕೋಲಾರದ ಮಾವು; ರೈತನಿಗೂ ಲಾಭ, ಗ್ರಾಹಕನಿಗೂ ಕಡಿಮೆ ಬೆಲೆ

ಕಿಸಾನ್‌ ರೈಲಿನಲ್ಲಿ ದೆಹಲಿಗೆ ಹೊರಟ ಕೋಲಾರದ ಮಾವು; ರೈತನಿಗೂ ಲಾಭ, ಗ್ರಾಹಕನಿಗೂ ಕಡಿಮೆ ಬೆಲೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ