• About
  • Advertise
  • Careers
  • Contact
Thursday, November 5, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ವಿಡಿಯೋದಲ್ಲಿರುವ ಕೇರಳ ಮಹಿಳೆ ಸ್ಟಿಂಗ್ ಪಿತೂರಿ ಭಾಗ!

cknewsnow desk by cknewsnow desk
November 4, 2026
in CRIME, NATION, POLITICS, STATE, WORLD
Reading Time: 2 mins read
0
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ
912
VIEWS
FacebookTwitterWhatsuplinkedinEmail

ತನಿಖೆ ದಾರಿ ತಪ್ಪಿಸಿದ ಪೊಲೀಸ್ ಆಯುಕ್ತರು; ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘನೆ ಎಂದು ಆರೋಪಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಹೇಳಿಕೆ; Statement ಬದಲಿಸಿದ ಆ ಮಹಿಳೆಯನ್ನು ನ್ಯಾಯಾಲಯದ ಮುಂದೆ ಏಕೆ ಹಾಜರುಪಡಿಸಿಲ್ಲ ಎಂದು ಪ್ರಶ್ನೆ; ಕೃಪಾ ಆಳ್ವ ಎಲ್ಲಿ ಹೋದರು?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ಸಂದರ್ಭದಲ್ಲಿ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ಕೇರಳದ ಮಹಿಳೆ, ಅನಂತರ ಹೇಳಿಕೆ ಬದಲಿಸಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಒಂದು ವೇಳೆ ಆಕೆ ಹೇಳಿಕೆಯನ್ನು ಬದಲಿಸಿದ್ದರೆ ಅವರನ್ನು ಕರೆತಂದು ನ್ಯಾಯಾಲಯದ ಮುಂದೆ ಯಾಕೆ ಹಾಜರುಪಡಿಸಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪೊಲೀಸರನ್ನು ಪ್ರಶ್ನಿಸಿದರು.

ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ಆ ಮಹಿಳೆ ತನ್ನ ಹೇಳಿಕೆಗಳನ್ನು ಬದಲಿಸಿದ್ದರೆ ಅವರು ಕೂಡ ಈ ಸ್ಟಿಂಗ್ ಪಿತೂರಿಯ ಭಾಗವೇ ಆಗುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆರೋಪಿ ಎಂದು ಹೆಸರಿಸಬೇಕಾಗುತ್ತದೆ. ಇದನ್ನು ಪೊಲೀಸರು ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಆ ಪ್ರಕರಣದ ತನಿಖೆಯ ವಿಚಾರಗಳನ್ನು ಪೊಲೀಸ್ ಆಯುಕ್ತರು ಬಹಿರಂಗ ಮಾಡಿರುವ ಬಗ್ಗೆ ಕೆಂಡಾಮಂಡಲರಾದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು; ಅವರ ಹೇಳಿಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಉಲ್ಲಂಘಿಸಿದಂತೆ ಆಗಿದೆ ಎಂದರು.

ಪೊಲೀಸ್ ಆಯುಕ್ತರು ತಮ್ಮ ಹೇಳಿಕೆಯ ಮೂಲಕ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ. ಸರ್ಕಾರಕ್ಕೆ ಹೇಗೆ ಬೇಕೋ ಹಾಗೆ ತನಿಖೆ ಮಾಡಿ ತೇಪೆ ಹಚ್ಚಲು ಇವರು ಶತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಚಿವರು ದೂರಿದರು.

ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಿ ಪೊಲೀಸರು ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ

2026 ಅಕ್ಟೋಬರ್ 21ರಂದು ಬೆಂಗಳೂರು ಪೊಲೀಸರು ಹೊರಡಿಸಿದ ಪತ್ರಿಕಾ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ ಅವರು; ಈ ತನಿಖೆಯು ಅಸಲಿ ಸತ್ಯವನ್ನು ಹೊರಗೆಳೆಯುವ ಬದಲಿಗೆ ಸಿದ್ದರಾಮಯ್ಯ ಅವರಿಗೆ ‘ಕ್ಲೀನ್ ಚಿಟ್’ ನೀಡಿ ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ. ಬಹುಶಃ ಅದಕ್ಕೆ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅವರು ದೂರಿದರು.

ಅಷ್ಟೇ ಅಲ್ಲ, ಸ್ಟಿಂಗ್ ಆಪರೇಷನ್ ಎನ್ನುವುದು ಕಟ್ಟುಕಥೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪೊಲೀಸರು ಹೇಳಿದ್ದಾರೆ. ಕಟ್ಟುಕಥೆ ಎಂದಾದ ಮೇಲೆ ಇನ್ನೂ ತನಿಖೆ ಯಾಕೆ ಮಾಡುತ್ತಿದ್ದೀರಿ? ಯಾರ ವಿರುದ್ಧ ಸಂಚು ಮಾಡಲು ತನಿಖೆ ಮುಂದುವರಿಸಿದ್ದೀರಿ ಎಂದು ಅವರು ಪ್ರಶ್ನೆ ಮಾಡಿದರು.

ಅಷ್ಟೇ ಅಲ್ಲ, ಕೇರಳಕ್ಕೆ ಹೋಗಿ ಸ್ಟಿಂಗ್ ಮಾಡಿದ್ದು ನಾನೇ. ಐ ಯಾಮ್ ಕಿಂಗ್ ಆಫ್ ಸ್ಟಿಂಗ್, ವೀಡಿಯೋದಲ್ಲಿ ಇರುವ ಧ್ವನಿಯೂ ನನ್ನದೇ ಎಂದು ಒಪ್ಪಿಕೊಂಡಿರುವ ವ್ಯಕ್ತಿಯನ್ನು ಇನ್ನೂ ಬಂಧಿಸಿಲ್ಲ ಯಾಕೆ? ರಾಕೇಶ್ ಶೆಟ್ಟಿ, ಕೃಪಾ ಆಳ್ವ ಸೇರಿ ನನ್ನ ವಿರುದ್ಧ ಸ್ಟಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅವರ ಪುತ್ರ, ಸಚಿವ ಯತೀಂದ್ರ ಅವರು ಇದೇ ಹೆಸರುಗಳನ್ನು ಹೇಳಿದ್ದಾರೆ. ಹಾಗಿದ್ದ ಮೇಲೆ ಅವರನ್ನು ಯಾಕೆ ಬಂಧನ ಮಾಡಲಿಲ್ಲ? ತನಿಖೆಯಲ್ಲಿ ಅವರಿಗೊಂದು, ಇವರಿಗೊಂದು ಎನ್ನುವುದು ಇರುತ್ತದಾ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಈ ತನಿಖೆಯ ಬಗ್ಗೆ ಸಾಕಷ್ಟು ಅನುಮಾನಗಳು ಇವೆ. ಶುರುವಿನಲ್ಲಿ ತನಿಖಾಧಿಕಾರಿ (IO) ಆಗಿದ್ದ ಇನ್ಸ್‌ಪೆಕ್ಟರ್ ಹಂತದ ಅಧಿಕಾರಿಯನ್ನು ಅಲ್ಲಿಂದ ತೆಗೆದು ಹಾಕಿದರು. ನಂತರ ಇನ್ನೊಬ್ಬ ಅಧಿಕಾರಿಯನ್ನು ನೇಮಕ ಮಾಡಿದ್ದಾರೆ. ಇದು ಪ್ರಶ್ನಾರ್ಹವಾಗಿದೆ ಎಂದರು ಸಚಿವರು.

ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ

ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎನ್ನುವುದೇ ಅನುಮಾನ ಎಂದ ಕುಮಾರಸ್ವಾಮಿ ಅವರು; ಸ್ಟಿಂಗ್ ಆಪರೇಷನ್ ವಿಡಿಯೋ ಅಸಲಿಯೇ ಅಥವಾ ಕೃತಕವಾಗಿ ಸೃಷ್ಟಿಸಿದ್ದೇ ಎಂಬುದನ್ನು ಹಾಗೂ ಅದನ್ನು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಲಾಗಿದೆಯೇ ಅಥವಾ ವ್ಯವಸ್ಥಿತವಾಗಿ ರೂಪಿಸಲಾಗಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ತಮ್ಮ ಹೊಣೆಗಾರಿಕೆಯನ್ನು ಅವರು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆಯೇ? ಎಂದರು.

ಪೊಲೀಸರು ಏಕಪಕ್ಷೀಯವಾಗಿ ನಡೆಯುತ್ತಿದೆ. ಅದರ ಬಗ್ಗೆ ನನಗೆ ಮಾಹಿತಿ ಇದೆ. ನಮ್ಮ ಪಕ್ಷದ ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುವ ಯುವಕನ ಮನೆಗೆ ಸರ್ಚ್ ಮಾಡಲು ಹೋಗಿದ್ದ ಪೊಲೀಸರು ಮೊಬೈಲ್ ಗಾಗಿ ಅವರ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಾರೆ. ಬ್ಯಾಂಕ್ ಪಾಸ್ ಬುಕ್ ತೆಗೆದುಕೊಂಡು ಬನ್ನಿ ಎಂದು ಹೇಳುತ್ತಾರೆ. ಸರ್ಚ್ ಮುಗಿಸಿಕೊಂಡು ವಾಪಸ್ ಬಂದಮೇಲೆ ನನ್ನದು ಚಿನ್ನದ ಬ್ರಾಸ್ ಲೈಟ್ ಕಳೆದುಹೋಗಿದೆ ಎಂದು ನಮ್ಮ ಕಾರ್ಯಕರ್ತನ ಪತ್ನಿಯ ಮೇಲೆ ಎಫ್ ಐಆರ್ ಮಾಡಿಸುತ್ತಾರೆ. ಅವರ ಮನೆಯ ನೆರೆಹೊರೆಯವರ ಮೇಲೆಯೂ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನು ಇದನ್ನು ತನಿಖೆ ಎಂದು ಹೇಳಲು ಸಾಧ್ಯವೇ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ತನಿಖೆ ನೆಪದಲ್ಲಿ ಪೊಲೀಸರು ನಮ್ಮವರನ್ನು ಬೆದರಿಸುತ್ತಿದ್ದಾರೆ:*ತನಿಖೆ ನೆಪದಲ್ಲಿ ಪೊಲೀಸರು ನಮ್ಮವರನ್ನು ಬೆದರಿಸುತ್ತಿದ್ದಾರೆ ಎಂದ ಸಚಿವ ಕುಮಾರಸ್ವಾಮಿ ಅವರು; ಒಂದೇ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ. ಬೆಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಹಾಗೂ ಪೊಲೀಸ್ ಆಯುಕ್ತ ನೀಡಿರುವ ಹೇಳಿಕೆಗಳು ಕೂಡ ಪರಸ್ಪರ ವೈರುಧ್ಯಗಳಿವೆ. ಅಪ್ಲೋಡ್ ಮಾಡಿರುವ ವಿಷಯದ ಬಗ್ಗೆ ಇವರು ತೋರಿಸುತ್ತಿರುವ ಕಾಳಜಿ, ಸ್ಟಿಂಗ್ ಮಾಡಿ ವಿಡಿಯೋ ರೆಕಾರ್ಡಿಂಗ್ ಮಾಡಿರುವ ಪಿತೂರಿಯ ಬಗ್ಗೆ ತನಿಖೆಯನ್ನು ಮಾಡುತ್ತಿಲ್ಲ ಎಂದು ಸಚಿವರು ದೂರಿದರು.

ನೂರಾರು ಸ್ಪ್ರಿಂಗ್ ವಿಡಿಯೋಗಳನ್ನು ಮಾಡಿಕೊಂಡು ಅಧಿಕಾರಿಗಳು, ಉದ್ದಿಮೆದಾರರು ಹಾಗೂ ಅನೇಕ ಗಣ್ಯ ವ್ಯಕ್ತಿಗಳನ್ನು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿರುವ ಪ್ರವೃತ್ತಿಯನ್ನು ಮಟ್ಟ ಹಾಕದಿದ್ದರೆ ಅದು ಪೊಲೀಸ್ ಇಲಾಖೆಗೆ ಕಂಟಕವಾಗುತ್ತದೆ ಎಂದು ಎಚ್ಚರಿಸಿದ ಕೇಂದ್ರ ಸಚಿವರು; ನಾನು ಯಾವುದೇ ವ್ಯಕ್ತಿಯನ್ನು ವೈಯಕ್ತಿಕವಾಗಿ ಗುರಿ ಮಾಡಿಕೊಂಡು ಈ ವಿಷಯವನ್ನು ಹೇಳುತ್ತಿಲ್ಲ. ಬದಲಿಗೆ ಸಮಾಜದ ಹಿತದೃಷ್ಟಿಯಿಂದ ಇಷ್ಟೆಲ್ಲವನ್ನು ಹೇಳಬೇಕಾಗುತ್ತದೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಡಿಕೆಶಿ ಭಾಷಣ ಕೇಳಿಸಿದ HDK

ಹಿಂದೆ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗಂಟೆಗಟ್ಟಲೆ ಭಾಷಣ ಮಾಡಿದರು. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಯ ಕುರಿತಂತೆ ಅವರು ದೀರ್ಘವಾಗಿ ಚರ್ಚೆ ಮಾಡಿ ಪೊಲೀಸರ ತನಿಖೆ ಯಾವ ದಿಕ್ಕಿನಲ್ಲಿ ಇರಬೇಕು ಎಂಬ ಬಗ್ಗೆ ಉಪದೇಶ ಮಾಡಿದ್ದರು. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಭಾಷಣ ಬಿಗಿದಿದ್ದರು. ಅಂತಹ ವ್ಯಕ್ತಿ ಮುಖ್ಯಮಂತ್ರಿಯಾಗಿರುವ ಈ ಸರಕಾರದಲ್ಲಿ ತನಿಖೆ ಯಾವ ರೀತಿ ನಡೆಯುತ್ತಿದೆ ಎಂಬುದು ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದು ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬಳಿ ತಾಂತ್ರಿಕ ಸಾಕ್ಷಿಗಳಿವೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಒಂದು ವೇಳೆ ಅವರು ಬಳಿ ಅಂತಹ ಸಾಕ್ಷಿಗಳಿದ್ದರೆ ಗಂಧದ ಕಡ್ಡಿ ಹಚ್ಚಿ ಪೂಜೆ ಮಾಡಲಿ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.ಹಾಗೆಯೇ ಪೊಲೀಸ್ ಆಯುಕ್ತರು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಒತ್ತಡಕ್ಕೆ ಮಾಡಿದ ನನ್ನ ಬಗ್ಗೆ ರಜಾದಿನವಾದ ಭಾನುವಾರ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯನ್ನು ಓಲೈಸಲು ಇಂತಹ ಹೇಳಿಕೆ ನೀಡಿ ತಾವೇ ಮುಜುಗರಕ್ಕೆ ಸಿಲುಕಿದ್ದಾರೆ. ತನಿಖಾ ಹಂತದಲ್ಲಿ ಯಾವುದೇ ವಿಷಯವನ್ನು ಬಹಿರಂಗವಾಗಿ ಹೇಳಬಾರದು ಎನ್ನುವ ಸುಪ್ರೀಂ ಕೋರ್ಟ್ ಆದೇಶವನ್ನು ಅವರು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂದು ಸಚಿವರು ಹೇಳಿದರು.

ಡಿಜಿ ಸಲೀಂ ಅವರಿಗೆ ಮಾರ್ಮಿಕ ಎಚ್ಚರಿಕೆ

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರ ಬಗ್ಗೆ ಅತ್ಯಂತ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಕುಮಾರಸ್ವಾಮಿ ಅವರು; ಸಲೀಂ ಅವರೇ ಚಕ್ರ ತಿರುಗುತ್ತದೆ. ಮೇಲೆ ಇದ್ದವರು ಕೆಳಗಡೆ ಬರಬೇಕು, ಕೆಳಗಡೆ ಇರುವವರು ಮೇಲೆ ಹೋಗಲೇಬೇಕು. ಇದು ಪ್ರಕೃತಿ ನಿಯಮ. ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ. ಮರ್ಜಿಗೆ ಕೆಲಸ ಮಾಡಿದರೆ ಅಪಾಯಕ್ಕೆ ಸಿಲುಕುವುದು ನೀವೇ ಆಗಿರುತ್ತೀರಿ ಎಂದು ನೇರವಾಗಿ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯೋತ್ಸವದ ದಿನ ಈ ಸರಕಾರ ಯಾವ ರೀತಿ ಕರಾಮತ್ತು ನಡೆಸಿದೆ ಎಂಬುದನ್ನು ನಾನು ಗಮನಿಸಿದ್ದೇನೆ. ಅಸಲಿ ಆರೋಪಿಗಳನ್ನು ಬಿಟ್ಟು ಕೇವಲ ವಿಡಿಯೋ ಅಪ್ ಲೋಡ್ ನೆಪದಲ್ಲಿ ನಮ್ಮ ಕಾರ್ಯಕರ್ತರ ಬೆನ್ನು ಬಿದ್ದಿದ್ದೀರಿ. ಅದರಲ್ಲಿ ನನ್ನ ಹೆಸರನ್ನು ಹೇಳಿದ ತಂದಿದ್ದೀರಿ. ನಾನು ನಿಮ್ಮ ಬೆದರಿಕೆಗಳಿಗೆ ಎದುರುವ ಪೈಕಿಯಲ್ಲ. ಬೇಕಿದ್ದರೆ ನನ್ನನ್ನು ಒಮ್ಮೆ ಟಚ್ ಮಾಡಿ ನೋಡಿ. ಅದು ಹೋಗಿ ಎಲ್ಲಿಗೆ ಮುಟ್ಟುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ. ಅಪಾಯದ ಜೊತೆ ನೀವು ಚೆಲ್ಲಾಟ ಆಡುತ್ತಿದ್ದೀರಿ. ನೀವೆಲ್ಲರೂ ತಕ್ಕ ಪಾಠ ಅನುಭವಿಸುತ್ತಿರಿ ಎಂದು ಸಚಿವರು ಎಚ್ಚರಿಕೆ ನೀಡಿದರು.

Tags: ckcknewsnowCongresshd kumaraswamyjdskarnatakanewssiddaramaiahSting ladySting operation
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

by cknewsnow desk
November 5, 2026
0

ಸಾರಿಗೆ ನಿಗಮಗಳ ಒಟ್ಟು ಹೊಣೆಗಾರಿಕೆ ₹7,130.80 ಕೋಟಿ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

by cknewsnow desk
November 5, 2026
0

ಮಹಿಳೆಯರಿಗೆ ಫ್ರೀ ಬಸ್ ಕೊಟ್ಟಿದ್ದಕ್ಕೆ ಆರ್ಥಿಕ ಹೊರೆ ಆಗಿದೆ ಎಂದ ಮುಖ್ಯಮಂತ್ರಿ

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿದ್ದಲ್ಲ; ರಾಜಮಾತೆ ಪ್ರಮೋದಾ ದೇವಿ

by cknewsnow desk
November 4, 2026
0

ಸರಕಾರ ಬೇಕಾದರೆ ಇನ್ನೊಂದು ಅಂಬಾರಿಯನ್ನು ಮಾಡಿಸಿಕೊಳ್ಳಲಿ

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

by cknewsnow desk
November 4, 2026
0

ಇಂದು ಮಧ್ಯರಾತ್ರಿಯಿಂದಲೇ ಬರೆ ಏರಿಕೆ ಜಾರಿ

ಹಾಸನ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಡಿದ A2 ಜತೆ ಡಿಕೆಶಿ ನಂಟು!

ಹಾಸನ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಡಿದ A2 ಜತೆ ಡಿಕೆಶಿ ನಂಟು!

by cknewsnow desk
November 4, 2026
0

ಪ್ರಿಯಾಂಕ್ ಖರ್ಗೆ ಪಾಸ್ ಟ್ರೇಲರ್ ಹೈ.. ಹಮಾರೇ ಪಾಸ್ ಪಿಕ್ಚರ್ ಹೈ

ಗೃಹ ಇಲಾಖೆ ನಡೆಸುವುದಕ್ಕೆ ಪ್ರಿಯಾಂಕ್ ಖರ್ಗೆ Unfit ಎಂದ ಹೆಚ್.ಡಿ.ಕುಮಾರಸ್ವಾಮಿ

ಗೃಹ ಇಲಾಖೆ ನಡೆಸುವುದಕ್ಕೆ ಪ್ರಿಯಾಂಕ್ ಖರ್ಗೆ Unfit ಎಂದ ಹೆಚ್.ಡಿ.ಕುಮಾರಸ್ವಾಮಿ

by cknewsnow desk
November 4, 2026
0

ಸ್ಟಿಂಗ್ ತನಿಖೆಯ ವಾಗ್ದಾಳಿ ಮುಂದುವರಿಸಿದ ಕೇಂದ್ರ ಸಚಿವರು; ಸಂತ್ರಸ್ತೆ ಕಲಿಸಿದ್ದ ಈ ಮೇಲ್ ಎಲ್ಲಿ ಹೋಯಿತು ಖರ್ಗೆ ಅವರೇ ಎಂದು ಕಿಡಿ

Next Post
ಹಾಸನ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಡಿದ A2 ಜತೆ ಡಿಕೆಶಿ ನಂಟು!

ಹಾಸನ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಡಿದ A2 ಜತೆ ಡಿಕೆಶಿ ನಂಟು!

Leave a Reply Cancel reply

Your email address will not be published. Required fields are marked *

Recommended

ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ

ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ

4 years ago
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಬಿಜೆಪಿ ಶಾಸಕರು, ಸಚಿವರ ರಹಸ್ಯ ಸಭೆ

5 years ago

Popular News

  • ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

    ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

    0 shares
    Share 0 Tweet 0
  • ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

    0 shares
    Share 0 Tweet 0
  • ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿದ್ದಲ್ಲ; ರಾಜಮಾತೆ ಪ್ರಮೋದಾ ದೇವಿ

    0 shares
    Share 0 Tweet 0
  • ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

    0 shares
    Share 0 Tweet 0
  • ಹಾಸನ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಡಿದ A2 ಜತೆ ಡಿಕೆಶಿ ನಂಟು!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

November 5, 2026
ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

November 5, 2026
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿದ್ದಲ್ಲ; ರಾಜಮಾತೆ ಪ್ರಮೋದಾ ದೇವಿ

November 4, 2026
ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ